HomeKarnataka84ನೇ ವಸಂತಕ್ಕೆ ಕಾಲಿಟ್ಟ ಯಡಿಯೂರಪ್ಪ: ಗಣ್ಯರಿಂದ ಶುಭಾಶಯ

84ನೇ ವಸಂತಕ್ಕೆ ಕಾಲಿಟ್ಟ ಯಡಿಯೂರಪ್ಪ: ಗಣ್ಯರಿಂದ ಶುಭಾಶಯ

ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ 84ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟುಹಬ್ಬವನ್ನು ಶಿಕಾರಿಪುರದಲ್ಲಿ ಕುಟುಂಬದವರೊಂದಿಗೆ ಆಚರಿಸಿದರು. ಹಲವು ರಾಜಕೀಯ ನಾಯಕರು ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಭಾಶಯಗಳನ್ನು ಸಲ್ಲಿಸಿದರು.

ಶುಕ್ರವಾರ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದ ಆರಾಧ್ಯದೈವ, ಐತಿಹಾಸಿಕ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಕುಟುಂಬದ ಎಲ್ಲ ಸದಸ್ಯರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಶಿಕಾರಿಪುರದಲ್ಲಿ ದಿವ್ಯಾಂಗರಿಗೆ ವಾಹನಗಳನ್ನು ಹಾಗೂ ತಾಯಂದಿರಿಗೆ, ಸಹೋದರಿಯರಿಗೆ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿದರು.  ರಾಜ್ಯಾದಾದ್ಯಂತ ಯಡಿಯೂರಪ್ಪ ಅಭಿಮಾನಿಗಳು ವಿವಿಧ ಕಾರ್ಯಕ್ರಮದ ಮೂಲಕ ಯಡಿಯೂರಪ್ಪ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲವಾರು ಬಿಜೆಪಿ ನಾಯಕರು, ಬಿಜೆಪಿ ಕಾರ್ಯಕರ್ತರು ಶಿಕಾರಿಪುರಕ್ಕೆ ಆಗಮಿಸಿ ನೆಚ್ಚಿನ ನಾಯಕನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಹಲವಾರು ನಾಯಕರು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಶುಭಾಶಯ ಸಲ್ಲಿಸಿದ್ದಾರೆ.

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ, ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ, ‘ಜನಾನುರಾಗಿ ಜನನಾಯಕ, ಪೂಜ್ಯ ತಂದೆಯವರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನವೆಂದರೆ ಅದು ನಮ್ಮ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಪಾಲಿಗೆ ಸಂಭ್ರದ ಹಬ್ಬ ಮಾತ್ರವಲ್ಲ, ಅದೊಂದು ಅಭಿಮಾನದ ಸೇವಾ ಪರ್ವ ಎಂದು ಹೇಳಿದ್ದಾರೆ.

ಅದರಲ್ಲೂ ಈ ಬಾರಿ ಸನ್ಮಾನ್ಯ ಶ್ರೀ ಯಡಿಯೂರಪ್ಪನವರು ತಮ್ಮ ಕರ್ಮಭೂಮಿ ಶಿಕಾರಿಪುರದಲ್ಲಿರುವುದರಿಂದ ಅಭಿಮಾನಿಗಳ ಉತ್ಸಾಹ ನೂರ್ಮಡಿಗೊಂಡಿದೆ. ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ತಮ್ಮದೇ ರೀತಿಯಲ್ಲಿ ಅಭಿಮಾನಿಗಳು ಆಚರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾತ್ರಿಯಿಂದಲೇ ಪ್ರಾರಂಭಿಸಿ ಬಹಳ ಸುಂದರವಾಗಿ ಚಿತ್ರಿಸಿರುವ ಯಡಿಯೂರಪ್ಪನವರ ಭಾವಚಿತ್ರದ ಬೃಹತ್ ರಂಗೋಲಿ ಕಣ್ಮನ ಸೆಳೆಯುತ್ತಿದೆ. ತಮ್ಮ ಸಾರ್ಥಕ ಸಾರ್ವಜನಿಕ ಜೀವನದಲ್ಲಿ ಪೂಜ್ಯ ತಂದೆಯವರು ಗಳಿಸಿರುವ ಈ ಅಭಿಮಾನವನ್ನು, ಈ ಪ್ರೀತಿ, ಈ ಆತ್ಮೀಯತೆಗಳನ್ನು ಪದಗಳಲ್ಲಿ ಹಿಡಿದಿಡುವುದು ಸಾಧ್ಯವೇ ಇಲ್ಲ ಎಂದು ತಿಳಿಸಿದ್ದಾರೆ.

ಬಿ.ವೈ.ರಾಘವೇಂದ್ರ ಶುಭಾಶಯ: ಯಡಿಯೂರಪ್ಪ ಪುತ್ರ, ಶಿವಮೊಗ್ಗ ಸಂಸದ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ, ‘ಜನಪರ ನಾಯಕ, ಅಭಿವೃದ್ಧಿಯ ಹರಿಕಾರರಿಗೆ ಜನ್ಮದಿನದ ಶುಭಾಶಯಗಳು’ ಎಂದು ಹೇಳಿದ್ದಾರೆ.

‘ಹೋರಾಟದಿಂದಲೇ ಜನಮನ ಗೆದ್ದ ಹುಟ್ಟುಹೋರಾಟಗಾರ, ಅಭಿವೃದ್ಧಿಯ ಹರಿಕಾರ, ಜನಪರ ನಾಯಕ, ರೈತಬಂಧು, ಹಿರಿಯ ರಾಜಕೀಯ ಮುತ್ಸದ್ಧಿಗಳು ಹಾಗೂ ನಮ್ಮೆಲ್ಲರ ಪ್ರೇರಣಾಸ್ತಂಭರಾದ ಪೂಜ್ಯ ತಂದೆಯವರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೃದಯಪೂರ್ವಕ ಜನ್ಮದಿನದ ಶುಭಾಶಯಗಳು’ ಎಂದು ತಿಳಿಸಿದ್ದಾರೆ.

‘ನಿಮ್ಮ ನಿಸ್ವಾರ್ಥ ಸೇವೆ, ದಿಟ್ಟ ನಾಯಕತ್ವ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಮಾಡಿದ ಅಮೂಲ್ಯ ಕೊಡುಗೆಗಳು ಸದಾ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಲಿ. ದೇವರು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಜನಸೇವೆಯ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.  ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಪೋಸ್ಟ್ ಹಾಕಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular