HomeKarnatakaಶೆಟ್ಟರ್ ವಿರುದ್ಧ ಘರ್ಜಿಸಿದ ಯಡಿಯೂರಪ್ಪ: ಲಕ್ಷ್ಮಣ ಸವದಿಗೆ ಸೋಲಿನ ಶಾಕ್ ಕೊಡಲು ಇಂದು ಭರ್ಜರಿ ಪ್ರಚಾರ

ಶೆಟ್ಟರ್ ವಿರುದ್ಧ ಘರ್ಜಿಸಿದ ಯಡಿಯೂರಪ್ಪ: ಲಕ್ಷ್ಮಣ ಸವದಿಗೆ ಸೋಲಿನ ಶಾಕ್ ಕೊಡಲು ಇಂದು ಭರ್ಜರಿ ಪ್ರಚಾರ

ಬೆಳಗಾವಿ: ಜಗದೀಶ್ ಶೆಟ್ಟರ್ ಗೆಲ್ಲಲ್ಲ, ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಗುಡುಗಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಅಥಣಿ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ಧ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಚಾರ ಕೈಗೊಂಡಿದ್ದಾರೆ. ಬುಧವಾರ ಅಥಣಿಗೆ ಆಗಮಿಸಲಿರುವ ಅವರು ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಕ್ಷ್ಮಣ ಸವದಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಮಹೇಶ ಕುಮಟಳ್ಳಿ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಯಡಿಯೂರಪ್ಪನವರಿಗೆ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮಹೇಶ ಕುಮಟಳ್ಳಿ ಪರ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಅಥಣಿಗೆ ಆಗಮಿಸಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿರುವ ಯಡಿಯೂರಪ್ಪ ನಂತರ ಮುಗಳಖೋಡ ಯಲ್ಲಾಲಿಂಗೇಶ್ವರ ಗದ್ದುಗೆ ದರ್ಶನ ಪಡೆದು ರೋಡ್ ಶೋ, ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular