ರಾಜ್ಯವನ್ನು ದಿವಾಳಿ ಸ್ಥಿತಿಗೆ ತಂದ ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರಲು ಮೀಸೆ ತಿರುವುತ್ತಾರೆ: ನಮ್ಮ ಗೆಲುವನ್ನು ಯಾವ ಶಕ್ತಿಯೂ ತಡೆಯಲ್ಲ: ಯಡಿಯೂರಪ್ಪ

ಚಾಮರಾಜನಗರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕರೇ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಯಂಕ, ನಾಣಿ, ಸೀನ ಎಂಬವವರಿದ್ದಾರೆ. ಬಿಜೆಪಿಯಲ್ಲಿ ಮೋದಿ, ಅಮಿತ್ ಶಾ ಸೇರಿದಂತೆ ಹಲವು ನಾಯಕರಿದ್ದಾರೆ. ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂದರು.

ರಾಜ್ಯವನ್ನು ದಿವಾಳಿ ಸ್ಥಿತಿಗೆ ತಂದಿದ್ದು ಕಾಂಗ್ರೆಸ್. ಇಂಥವರು ಮತ್ತೆ ಅಧಿಕಾರಕ್ಕೆ ಬರಬೇಕೆಂದು ಮೀಸೆ ತಿರುವುತ್ತಾರೆ. ಮಲೆ ಮಹದೇಶ್ವರನ ಆಶೀರ್ವಾದದಿಂದ ವಿಜಯ ಸಂಕಲ್ಪ ಯಾತ್ರೆ ಶುರುವಾಗಿದೆ. ನಮ್ಮ ಗೆಲುವನ್ನು ಯಾವ ಶಕ್ತಿಯಿಂದಲೂ ತಡೆಯಲು ಆಗಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read