HomeKarnatakaಈಶ್ವರಪ್ಪ ಪುತ್ರನಿಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ, ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ: ಯಡಿಯೂರಪ್ಪ

ಈಶ್ವರಪ್ಪ ಪುತ್ರನಿಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ, ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ: ಯಡಿಯೂರಪ್ಪ

ಶಿವಮೊಗ್ಗ: ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಟಿಕೆಟ್ ನಿರ್ಧಾರ ಮಾಡಿದೆ. ಈಶ್ವರಪ್ಪ ಪಕ್ಷ ಕಟ್ಟಿ ಬೆಳೆಸಿದವರು, ಮನಸ್ಸಿಗೆ ನೋವಾಗಿರಬಹುದು. ರಾಜ್ಯ ನಾಯಕರು ಈಶ್ವರಪ್ಪನವರೊಂದಿಗೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನಾಳಿನ ಕಾರ್ಯಕ್ರಮಕ್ಕೆ ಎಲ್ಲರೂ ಬರುತ್ತಾರೆ. ಕಾರ್ಯಕ್ರಮಕ್ಕೆ ಬಂದು ಈಶ್ವರಪ್ಪ ಮಾತನಾಡುವ ವಿಶ್ವಾಸ ಇದೆ. ಅವರನ್ನು ಮತ್ತೆ ಕರೆತರುವ ಪ್ರಯತ್ನವನ್ನು ಪಕ್ಷದ ಹಿರಿಯರು ಮಾಡುತ್ತಿದ್ದಾರೆ. ಮನಸ್ಸಿಗೆ ಆದ ನೋವಿನಿಂದ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ. ಟಿಕೆಟ್ ವಿಚಾರದಲ್ಲಿ ನಮ್ಮ ಪಾತ್ರ ಏನೂ ಇಲ್ಲ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ತೀರ್ಮಾನವಾಗಿ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈಶ್ವರಪ್ಪನವರು ನಮ್ಮ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular