HomeKarnatakaಯಡಿಯೂರಪ್ಪ ಮತ್ತು ಮಕ್ಕಳಿಗೆ ಸೋಲಿನ ರುಚಿ ತೋರಿಸಿ ಬುದ್ಧಿ ಕಲಿಸಲು ಜನ ತೀರ್ಮಾನಿಸಿದ್ದಾರೆ: ಈಶ್ವರಪ್ಪ ವಾಗ್ದಾಳಿ

ಯಡಿಯೂರಪ್ಪ ಮತ್ತು ಮಕ್ಕಳಿಗೆ ಸೋಲಿನ ರುಚಿ ತೋರಿಸಿ ಬುದ್ಧಿ ಕಲಿಸಲು ಜನ ತೀರ್ಮಾನಿಸಿದ್ದಾರೆ: ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ. ಶಿಕಾರಿಪುರ ಕ್ಷೇತ್ರದ ಜನರನ್ನು ಕುರಿಗಳು ಎಂದುಕೊಂಡಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಶಿಕಾರಿಪುರದಲ್ಲಿ ಮಾತನಾಡಿದ ಅವರು, ರಾಘವೇಂದ್ರರನ್ನು ಸೋಲಿಸುವ ಮೂಲಕ ಯಡಿಯೂರಪ್ಪರಿಗೆ ಬುದ್ದಿ ಕಲಿಸಬೇಕು. ಸೋಲಿನ ರುಚಿ ಏನು ಅಂತ ಯಡಿಯೂರಪ್ಪಗೆ ತೋರಿಸಬೇಕು. ಅಪ್ಪ, ಮಕ್ಕಳು ಬೇಡವೆಂದು ಶಿಕಾರಿಪುರದ ಜನ ತೀರ್ಮಾನಿಸಿದ್ದಾರೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಪುತ್ರ ರಾಘವೇಂದ್ರರನ್ನು ಸೋಲಿಸಿಯೇ ಸೋಲಿಸುತ್ತೇನೆ. ಶಿವಮೊಗ್ಗ ಕ್ಷೇತ್ರದಲ್ಲಿ ನಾನು ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಪಕ್ಷ ಉಳಿಯಬೇಕು. ಹಿಂದುತ್ವ ಉಳಿಯಬೇಕು. ಅದಕ್ಕಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ನರೇಂದ್ರ ಮೋದಿ ಕಾಂಗ್ರೆಸ್ ಕುಟುಂಬದ ಕೈಯಲ್ಲಿ ಇದೆ ಎನ್ನುತ್ತಾರೆ. ರಾಜ್ಯದ ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಬಿಜೆಪಿಯಲ್ಲಿಯೂ ಕಾಂಗ್ರೆಸ್ ಪಕ್ಷದ ಸಂಸ್ಕೃತಿ ನಡೆಯುತ್ತಿದೆ. ಶಿಕಾರಿಪುರದಲ್ಲಿ ಅನೇಕ ಕಾರ್ಯಕರ್ತರು ನೋವು ಅನುಭವಿಸಿದ್ದಾರೆ. ಆದರೆ, ಮುಂದೆ ಬಂದು ಹೇಳಿಕೊಳ್ಳುವ ಸ್ಥಿತಿಯಲ್ಲಿ ಯಾರೂ ಇಲ್ಲ. ಹಾವೇರಿಗೆ ಬೊಮ್ಮಾಯಿ, ಚಿಕ್ಕಮಗಳೂರಿಗೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಕೊಡಿಸಲು ಹಠ ಹಿಡಿದಿದ್ದರಂತೆ ಎಂದು ಶಿಕಾರಿಪುರದಲ್ಲಿ ಬಿ.ಎಸ್.ವೈ. ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular