HomeKarnatakaಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಯೆಲ್ಲೋ ಅಲರ್ಟ್

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಯೆಲ್ಲೋ ಅಲರ್ಟ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೇ 19, 20 ರಂದು ಬೆಂಗಳೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ 24 ಗಂಟೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ಮೇ 19 ರಂದು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೇ 20ರಂದು ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ, ಕೊಡಗು, ತುಮಕೂರು, ಮೇ 21ರಂದು ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular