HomeKarnatakaದಕ್ಷಿಣ, ಉತ್ತರ ಒಳನಾಡು ಸೇರಿ ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆ

ದಕ್ಷಿಣ, ಉತ್ತರ ಒಳನಾಡು ಸೇರಿ ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆಯ ಆರ್ಭಟ ಮುಂದುವರೆಯಲಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಕಡಿಮೆ ಪ್ರಮಾಣದ ಮಳೆ ಇರಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 7 ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

ನೀಡಿದೆ ಜುಲೈ 14, 15 ರಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular