HomeKarnatakaಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಪೂರ್ವದ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಒಂದೆರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರದಿಂದ ತಮಿಳುನಾಡು, ಆಂಧ್ರಪ್ರದೇಶ ಭಾಗದಲ್ಲಿ ಮಳೆಯಾಗುತ್ತಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಕೆಲವೆಡೆ ತುಂತುರು ಮಳೆಯಾಗಿದೆ.

ಉಳಿದಂತೆ ನವೆಂಬರ್ 13, 14 ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 17ರ ವರೆಗೆ, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 19 ರವರೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular