ಗಮನಿಸಿ: ಕರಾವಳಿ ಸೇರಿ ರಾಜ್ಯಾದ್ಯಂತ 4 ದಿನ ಭಾರಿ ಮಳೆ ಮುನ್ಸೂಚನೆ: ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆ. 25 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೆ. 26ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಸೆಪ್ಟೆಂಬರ್ 27 ಮತ್ತು 28 ರಂದು ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆ. 25, 26ರಂದು ಒಳನಾಡಿನ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆ. 26ರಂದು ಬಾಗಲಕೋಟೆ, ವಿಜಯಪುರ, ಚಿಕ್ಕಮಗಳೂರು, ಕಲಬುರಗಿ, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸೆ. 28, 29ರಂದು ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read