ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ 5 ದಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 27 ರಿಂದ ಮೇ 1 ರವರೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ.

ಏಪ್ರಿಲ್ 27, 28 ಹಾಗೂ ಮೇ 1 ರಂದು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಗದಗ, ಧಾರವಾಡ, ಕೊಪ್ಪಳ, ಕಲಬುರ್ಗಿ, ಹಾವೇರಿ, ಯಾದಗಿರಿ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.

ಏಪ್ರಿಲ್ 29 ರಂದು ಈ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಬೀದರ್, ಯಾದಗಿರಿ ಮತ್ತು ಕಲಬುರ್ಗಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read