HomeLatest Newsಮತ್ತೆ ಪ್ರಬಲಗೊಂಡ ಮುಂಗಾರು, ಭಾರಿ ಮಳೆ ಸಾಧ್ಯತೆ ಹಿನ್ನೆಲೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮತ್ತೆ ಪ್ರಬಲಗೊಂಡ ಮುಂಗಾರು, ಭಾರಿ ಮಳೆ ಸಾಧ್ಯತೆ ಹಿನ್ನೆಲೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಪ್ರಬಲವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ ನಾಲ್ಕು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಎರಡು ದಿನಗಳಿಂದ ಬಹುತೇಕ ಕಡೆ ಮಳೆಯಾದ ವರದಿಯಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಹಾಸನ, ಕೊಡಗು, ಮೈಸೂರು, ರಾಮನಗರ, ಮಂಡ್ಯ, ಕೋಲಾರ, ತುಮಕೂರಿನಲ್ಲಿ ಆಗಸ್ಟ್ 5 ರಿಂದ 8 ರವರೆಗೆ ಭಾರೀ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 7ರಿಂದ ಎರಡು ದಿನಗಳ ಕಾಲ ಚಿತ್ರದುರ್ಗ, ದಾವಣಗೆರೆ, ಬೀದರ್, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 8 ರಂದು ವಿಜಯಪುರ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular