HomeKarnatakaಮುಂದಿನ ಮೂರು ದಿನ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಣೆ

ಮುಂದಿನ ಮೂರು ದಿನ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಂಭವವಿದೆ. ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಅ. 11ರಿಂದ 13ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಅ. 11, 12ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಕೆಲವು ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ. 11ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ. 12, 13 ರಂದು ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular