HomeKarnatakaಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮುಂಗಾರು ಮಳೆಗೆ ಅಡ್ಡಿ ಇಲ್ಲ: ಜೂ. 3ರ ವೇಳೆಗೆ ರಾಜ್ಯಕ್ಕೆ ಮಾನ್ಸೂನ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮುಂಗಾರು ಮಳೆಗೆ ಅಡ್ಡಿ ಇಲ್ಲ: ಜೂ. 3ರ ವೇಳೆಗೆ ರಾಜ್ಯಕ್ಕೆ ಮಾನ್ಸೂನ್

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಪ್ರತ್ಯೇಕ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ಮುಂಗಾರು ಆರಂಭಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.

ಮೇ 31ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ನಂತರದ ಒಂದೆರಡು ದಿನಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಆಗಮನವಾಗಲಿದೆ. ಈಗಾಗಲೇ ನೈರುತ್ಯ ಮುಂಗಾರು ಮಾರುತಗಳು ಚಲನೆ ಆರಂಭಿಸಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮುಂಗಾರಿಗೆ ಇನ್ನಷ್ಟು ಅನುಕೂಲಕರವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಬ್ಬಿ ಸಮುದ್ರದಲ್ಲಿ ರೂಪುಗೊಂಡಿರುವ ಮತ್ತೊಂದು ವಾಯುಭಾರ ಕುಸಿತ ಪ್ರಬಲವಾದಲ್ಲಿ ಮುಂದಿನ ಎರಡು ದಿನ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮೇ 24, 25ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular