HomeKarnatakaಒಂದು ವಾರ ರಾಜ್ಯದಲ್ಲಿ ಮಳೆ: ಕೆಲವೆಡೆ ಗುಡುಗು ಸಹಿತ ವರ್ಷಧಾರೆ: 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಒಂದು ವಾರ ರಾಜ್ಯದಲ್ಲಿ ಮಳೆ: ಕೆಲವೆಡೆ ಗುಡುಗು ಸಹಿತ ವರ್ಷಧಾರೆ: 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಕೆಲವು ಕಡೆ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಿಗೆ ಶುಕ್ರವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಳ್ಳಾರಿ ದಾವಣಗೆರೆ ಚಿತ್ರದುರ್ಗ ಜಿಲ್ಲೆಯ ಕೆಲವು ಕಡೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಂಭವ ಇದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮೇ 20ರವರೆಗೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular