HomeKarnatakaರಾಜ್ಯದ ಹಲವೆಡೆ ಮಳೆ ಬಿರುಸು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ಹಲವೆಡೆ ಮಳೆ ಬಿರುಸು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡಿದೆ. ಶುಕ್ರವಾರ ರಾತ್ರಿ ಮತ್ತು ಶನಿವಾರ ಯಾದಗಿರಿ, ಶಿವಮೊಗ್ಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಭಾಗದಲ್ಲಿ ಮಳೆಯಾಗಿದೆ.

ಆಗಸ್ಟ್ 18 ರಿಂದ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ವಿಜಯಪುರ, ಯಾದಗಿರಿ, ಕಲಬುರಗಿ, ಕೊಪ್ಪಳ, ಬೆಳಗಾವಿ, ಧಾರವಾಡ, ಬೀದರ್, ತುಮಕೂರು, ಗದಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್ 20ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 18 ರಿಂದ 21 ರವರೆಗೆ ಉತ್ತರ ಕರ್ನಾಟಕ ಭಾಗದ ಹಲವು ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವ ಇದೆ. ಆ. 22ರಿಂದ ರಾಜ್ಯದಲ್ಲಿ ಮಳೆ ಇಳಿಮುಖವಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular