HomeKarnatakaಚುರುಕಾಗಲಿದೆ ಹಿಂಗಾರು: ನ. 23ರಿಂದ 3 ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

ಚುರುಕಾಗಲಿದೆ ಹಿಂಗಾರು: ನ. 23ರಿಂದ 3 ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮತ್ತೆ ಚುರುಕಾಗಲಿದ್ದು, ನವೆಂಬರ್ 23 ರಿಂದ 3 ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಒಣಹವೆ ಇದೆ. ಹಿಂಗಾರು ಮಳೆ ಕ್ಷೀಣವಾಗಿದೆ. ನವೆಂಬರ್ 23 ರಿಂದ 26ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ನವೆಂಬರ್ 23, 24ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular