HomeKarnataka'ಫೆಂಗಲ್' ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗೆ 'ಯೆಲ್ಲೋ ಅಲರ್ಟ್'

‘ಫೆಂಗಲ್’ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳವಾರ ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರು ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರು, ಕೋಲಾರ, ತುಮಕೂರು ಮೊದಲಾದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಉತ್ತರ ಒಳನಾಡಿನ ರಾಯಚೂರು ಸೇರಿ ಅನೇಕ ಜಿಲ್ಲೆಗಳ ಹಲವೆಡೆ ಲಘು ಮಳೆಯಾಗುವ ಸಂಭವ ಇದೆ. ಬೆಂಗಳೂರು, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಮವಾರ ಹೆಚ್ಚಿನ ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular