HomeKarnatakaಸಿಡಿಲು ಬಡಿದು ನಾಲ್ವರು ಸಾವು: ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಂಭವ

ಸಿಡಿಲು ಬಡಿದು ನಾಲ್ವರು ಸಾವು: ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಂಭವ

ಬೆಂಗಳೂರು: ರಾಜ್ಯದಲ್ಲಿ ಅನೇಕ ಕಡೆ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಜೋಳ ಬಿತ್ತನೆ ಮಾಡುವಾಗ ಸಿಡಿಲು ಬಡಿದು ಪುಟ್ಟಮ್ಮ, ದ್ಯಾವಮ್ಮ ಮೃತಪಟ್ಟಿದ್ದಾರೆ. ಉಷಾ, ಸರೋಜಮ್ಮ, ಮರಿಗೌಡ ಗಾಯಗೊಂಡಿದ್ದು, ಅವರನ್ನು ಅರಕಲಗೂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ದೂಪದಹಳ್ಳಿಯಲ್ಲಿ ಕುರಿ ಕಾಯುತ್ತಿದ್ದ ಬಾಲಕ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಗಿ ಅಮೋಘ ಶಿವಣಗಿ ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆ ಕುಂಬಳಾವತಿ ಗ್ರಾಮದಲ್ಲಿ ರೈತ ಸೋಮಪ್ಪ ಪೂಜಾರ ಅವರಿಗೆ ಸೇರಿದ ಆಕಲು ಸಿಡಿಲು ಬಡಿದು ಮೃತಪಟ್ಟಿದೆ.

ಯೆಲ್ಲೋ ಅಲರ್ಟ್:

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಜೂನ್ 6 ಮತ್ತು 7ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ. ಜೂನ್ 6 ರಂದು ದಕ್ಷಿಣ ಕನ್ನಡ, ಬೆಳಗಾವಿ, ಗದಗ, ರಾಯಚೂರು, ಕಲಬುರಗಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂನ್ 7 ರಂದು ಕೊಪ್ಪಳ, ಕಲಬುರಗಿ, ಬೆಳಗಾವಿ, ಯಾದಗಿರಿ, ವಿಜಯಪುರ, ರಾಯಚೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular