HomeKarnatakaಗುಡ್ ಫ್ರೈಡೇ, ಈಸ್ಟರ್: ಬೆಂಗಳೂರು-ಮಡಗಾಂವ್ ವಿಶೇಷ ರೈಲು

ಗುಡ್ ಫ್ರೈಡೇ, ಈಸ್ಟರ್: ಬೆಂಗಳೂರು-ಮಡಗಾಂವ್ ವಿಶೇಷ ರೈಲು

ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ಮಡಗಾಂವ್ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06271 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 2ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಏಪ್ರಿಲ್ 3ರಂದು ಸಂಜೆ 5.30ಕ್ಕೆ ಮಡಗಾಂವ್ ತಲುಪಲಿದೆ.

ಹಿಂದಿರುಗುವ ಪಯಾಣದಲ್ಲಿ, ರೈಲು ಸಂಖ್ಯೆ 06272 ಮಡಗಾಂವ್- ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5ರಂದು ಬೆಳಿಗ್ಗೆ 11 ಗಂಟೆಗೆ ಮಡಗಾಂವ್‌ನಿಂದ ಹೊರಟು ಏಪ್ರಿಲ್ 6ರಂದು ಬೆಳಗಿನ ಜಾವ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವಿಶೇಷ ರೈಲುಗಳು ಮಾರ್ಗಮಧ್ಯೆ ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕಾಣಕೋಣ ನಿಲ್ದಾಣಗಳಲ್ಲಿ ರೈಲು ನಿಲ್ಲಲಿದೆ.

ಹಿಂದಿರುಗುವ ಪಯಾಣದಲ್ಲಿ ರೈಲು ಸಂಖ್ಯೆ 06272 ಯಶವಂತಪುರ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ರೈಲು ನಿಲ್ಲಲಿದೆ.

ಈ ವಿಶೇಷ ರೈಲು ಒಟ್ಟು 19 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎರಡು ಎಸಿ 2-ಟೈರ್, ಎರಡು ಎಸಿ 3-ಟೈರ್, 9 ಸ್ತ್ರೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್‌ಎಲ್‌ಆರ್/ ಡಿ ಬೋಗಿಗಳು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular