HomeLatest NewsBIG NEWS: ರಜೆಗೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು

BIG NEWS: ರಜೆಗೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು

ಕೋಲಾರ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆಚಂಪಲ್ಲಿ ಗ್ರಾಮದಲ್ಲಿ ನಡೆದಿದೆ.

ಮುನಿ ನಾರಾಯಣ ಹೃದಯಾಘಾತದಿಂದ ಸಾವನ್ನಪ್ಪಿರುವ ಯೋಧ. ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿ ನಾರಾಯಣ ಕಳೆದ ಎರಡು ತಿಂಗಳ ಹಿಂದೆ ರಜೆಯ ಮೇಲೆ ಊರಿಗೆ ಬಂದಿದ್ದರು.

ಮನೆಯಲ್ಲಿ ರಾತ್ರಿ ಮಲಗಿದ್ದ ಮುನಿ ನಾರಾಯಣಪ್ಪ, ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇಂದು ಸ್ವಗ್ರಾಮ ಆಚಂಪಲ್ಲಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular