HomeLatest NewsSHOCKING: ಪೊಲೀಸ್ ಠಾಣೆಗೆ ಕರೆ ಮಾಡಿ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

SHOCKING: ಪೊಲೀಸ್ ಠಾಣೆಗೆ ಕರೆ ಮಾಡಿ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ ನಿಂದ ತಲೆಗೆ ಗುಂಡು ಹಾರ್ಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡಿನ ಘಟ್ಟದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿ.ಕೆ.ಕಲ್ಲೇಶ್ (60) ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ. ಕಲ್ಲೇಶ್ ಎರಡು ಮದುವೆಯಾಗಿದ್ದರು. ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಯನ್ನೂ ಪಡೆಯುತ್ತಿದ್ದರು.

ಎರಡು ದಿನಗಳ ಹಿಂದೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ನಿ ಬಳಿ ಹೇಳಿದ್ದರಂತೆ. ಪತ್ನಿ ಸಮಾಧಾನಪಡಿಸಿದ್ದರು. ಆದರೆ ಇಂದು ಬೆಳಿಗ್ಗೆ ಸಕಲೇಶಪುರ ಪೊಲೀಸ್ ಠಾಣೆಗೆ ಕರೆ ಮಾಡಿದ್ದ ಕಲ್ಲೇಶ್, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಫೋನ್ ಕಟ್ ಮಾಡಿದ್ದಾರೆ. ತಕ್ಷಣ ಹಳೇಬೀಡು ಪೊಲೀಸರಿಗೆ ಸಕಲೇಶಪುರ ಪೊಲೀಸರು ಮಾಹಿತಿ ನೀಡಿ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದರು. ಘಟ್ಟದಹಳ್ಳಿ ಗ್ರಾಮಕ್ಕೆ ಪೊಲೀಸರು ಬರುವಷ್ಟರಲ್ಲಿ ಕಲ್ಲೇಶ್ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಳೆಬೀಡು ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular