ಬೆಂಗಳೂರು : ಜೂನ್ 21 ರಂದು ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ‘ಯೋಗ ದಿನಾಚರಣೆ’ ( Yoga Day) ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಜೂನ್ 21 ರಂದು ಯೋಗ ದಿನಾಚರಣೆ ಹಿನ್ನೆಲೆ ಅಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಯೋಗ ದಿನ ಆಚರಿಸಿ ಅದರ ಮಹತ್ವ ಮತ್ತು ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಹಾಗೆ ಯೋಗ ದಿನಾಚರಣೆಯ ಫೋಟೋಗಳನ್ನು ಕಾಲೇಜಿನ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್ 21 ರಂದು ವಿಶ್ವದಾದ್ಯಂತ ಬಹಳ ಅದ್ಧೂರಿಯಾಗಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. 2015 ಜೂನ್ 21ರಂದು ಚೊಚ್ಚಲ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
You Might Also Like
TAGGED:yoga day in degree colleges