ಜೂ. 21 ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಯೋಗ ದಿನಾಚರಣೆ ಆಚರಿಸಲು ಸೂಚನೆ

ಬೆಂಗಳೂರು: ಜೂನ್ 21ರಂದು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ನಿರ್ದೇಶನ ನೀಡಲಾಗಿದೆ.

ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಉಪ ಸಮನ್ವಯ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ ಯಶಸ್ವಿಗೊಳಿಸಲು ಕ್ರಮ ವಹಿಸಬೇಕು ಎಂದು ತಿಳಿಸಲಾಗಿದೆ.

ಯೋಗ ದಿನಾಚರಣೆಯನ್ನು ಶಾಲೆಗಳಲ್ಲಿ ಆಚರಿಸಿದ ಬಗ್ಗೆ ಜೂನ್ 25ರೊಳಗೆ ಫೋಟೋಗಳೊಂದಿಗೆ ವರದಿಯನ್ನು ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read