ಬೆಂಗಳೂರು: ಯೋಗ ಕಲಿಸಿಕೊಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಪೊಕ್ಸೋ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಯೋಗ ಕೇಂದ್ರವೊಂದನ್ನು ನಡೆಸುತ್ತಿದ್ದ ನಿರಂಜನ ಮೂರ್ತಿ, ಅಪ್ರಾಪ್ತೆಯೊಬ್ಬರಿಗೆ ಯೋಗ ಕಲಿಸಿಕೊಡುವುದಾಗಿ ಹೇಳಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಿನ್ನ ಹೆಸರು ಬರುವಂತೆ ಮಾಡುತ್ತೇನೆ ಎಂದು ನಂಬಿಸಿ ಸರ್ಕಾರಿ ಕೆಲಸದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ವೆಸಗಿರುವ ಆರೋಪ ಕೇಳಿಬಂದಿದೆ.
ಸಂತ್ರಸ್ತ ಬಾಲಕಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ನಿರಂಜನ ಮೂರ್ತಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
