HomeKarnatakaBREAKING : ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ...

BREAKING : ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ : ಆದೇಶ ಕಾಯ್ದಿರಿಸಿದ ಕೋರ್ಟ್.!


ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಅಪರಾಧಿಗಳೆಂದು ಸಾಬೀತಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಗೆ ನೀಡಬೇಕಾದ ಶಿಕ್ಷೆಯ ಪ್ರಮಾಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಳೆಗೆ (ಏಪ್ರಿಲ್ 17) ಕಾಯ್ದಿರಿಸಿದೆ. ಇಂದು ಶಿಕ್ಷೆಯ ಪ್ರಮಾಣದ ಕುರಿತು ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಅಂತಿಮ ತೀರ್ಪನ್ನು ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ನ್ಯಾಯಾಲಯದ ಮಹತ್ವದ ತೀರ್ಪು
ಏಪ್ರಿಲ್ 15 ರಂದು ನಡೆದ ವಿಚಾರಣೆಯಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 19 ಜನರನ್ನು ದೋಷಿಗಳು ಎಂದು ನ್ಯಾಯಾಲಯ ಘೋಷಿಸಿತ್ತು.ಇಂದು ವಾದ ವಿವಾದ ಆಲಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಾಳೆಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ  ಹೇಳಿದ್ದಾರೆ.

ಏನಿದು ಘಟನೆ? (ಹಿನ್ನೆಲೆ)
• ಬರ್ಬರ ಕೊಲೆ: 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಉದಯ ಜಿಮ್ನಲ್ಲಿ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.
• ಆರಂಭಿಕ ತನಿಖೆ: ಮೊದಲು ಸ್ಥಳೀಯ ಪೊಲೀಸರು ಇದನ್ನು ಆಸ್ತಿ ವಿವಾದದ ಕೊಲೆ ಎಂದು ಬಿಂಬಿಸಿ ಆರು ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದರು.
• ಸಿಬಿಐ ತನಿಖೆ: ಮೃತರ ಕುಟುಂಬದ ಒತ್ತಾಯದ ಮೇರೆಗೆ 2019ರಲ್ಲಿ ಪ್ರಕರಣ ಸಿಬಿಐ ಕೈಗೆ ಹೋದಾಗ, ಇದೊಂದು ರಾಜಕೀಯ ಪ್ರೇರಿತ ಕೊಲೆ ಎಂಬುದು ಬಯಲಾಗಿತ್ತು.
• ಬಂಧನ: ಸಿಬಿಐ ತನಿಖೆ ಚುರುಕುಗೊಳಿಸಿದ ನಂತರ 2020ರ ನವೆಂಬರ್ 5ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುದೀರ್ಘ ಕಾನೂನು ಹೋರಾಟ
ಈ ಪ್ರಕರಣದಲ್ಲಿ ಒಟ್ಟು 21 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು. ದೀರ್ಘಕಾಲದ ವಿಚಾರಣೆಯ ನಂತರ, ತಾಂತ್ರಿಕ ಕಾರಣಗಳಿಂದಾಗಿ ತೀರ್ಪು ಏಪ್ರಿಲ್ 9ರಿಂದ ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿತ್ತು. ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದು ಹೊರಬಂದಿದ್ದ ವಿನಯ್ ಕುಲಕರ್ಣಿಗೆ ಈಗ ನ್ಯಾಯಾಲಯದ ತೀರ್ಪು ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.ನಾಳೆ ಕೋರ್ಟ್ ಏನು ಶಿಕ್ಷೆ ಪ್ರಕಟಿಸಲಿದೆ ಎಂಬುದು ಸದ್ಯಕ್ಕಿರುವ ಕುತೂಹಲ.

ನಿನ್ನೆ ನ್ಯಾಯಾಲಯದಲ್ಲಿ ನಡೆದಿದ್ದೇನು?
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು ಏಪ್ರಿಲ್ 15 ರಂದು ಈ ಮಹತ್ವದ ತೀರ್ಪು ಪ್ರಕಟಿಸಿದರು. ತೀರ್ಪು ಓದುತ್ತಿದ್ದಂತೆ ವಿನಯ್ ಕುಲಕರ್ಣಿ ಅವರು ನ್ಯಾಯಾಲಯದಲ್ಲೇ ಕುಸಿದು ಕುಳಿತು ಕಣ್ಣೀರಿಟ್ಟರು. ಇಷ್ಟು ವರ್ಷಗಳ ಕಾಲ ನಡೆಸಿದ ಕಾನೂನು ಹೋರಾಟದ ಪ್ರಯತ್ನವೆಲ್ಲಾ ಒಂದೇ ತೀರ್ಪಿನೊಂದಿಗೆ ಅಂತ್ಯವಾಯಿತು ಎಂಬ ನೋವು ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು. ಈ ವೇಳೆ ಕೋರ್ಟ್ ಆವರಣದಲ್ಲಿದ್ದ ಅವರ ಮೂವರು ಮಕ್ಕಳೂ ಕೂಡ ಕಣ್ಣೀರಿಟ್ಟರು.

ಶಾಸಕ ಸ್ಥಾನಕ್ಕೆ ಕುತ್ತು?
ಕಾನೂನಿನ ಪ್ರಕಾರ, ಯಾವುದೇ ಶಾಸಕರಿಗೆ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆ ಪ್ರಕಟವಾದರೆ, ಅವರು ತಕ್ಷಣವೇ ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular