HomeKarnatakaBIG NEWS: ಯೋಗೇಶ್ ಗೌಡ ಹತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ...

BIG NEWS: ಯೋಗೇಶ್ ಗೌಡ ಹತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ; ಕೊಲೆಯಾದ ವ್ಯಕ್ತಿ ಮಕ್ಕಳಿಗೆ 16 ಲಕ್ಷ ಪರಿಹಾರ ನೀಡಲು ಆದೇಶ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಸತತ 10 ವರ್ಷಗಳ ಸುದೀರ್ಘ ಕಾನೂನು ಹೋರಾಟ ವಾದ ಮಂಡನೆಗಳ ಬಳಿಕ ಬೆಂಗಳೂರು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದ್ದಾರೆ.

ಅಲ್ಲದೇ ಯೋಗೇಶ್ ಗೌಡ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ ನೀಡಲು ಅಪರಾಧಿಗಳಿಗೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದಲ್ಲಿ ಎ 19 ಚನ್ನಕೇಶವ ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ನೀಡಿರುವ ಕೋರ್ಟ್ ಎ1 ಮುತ್ತಗಿ ಮಾಫಿ ಸಾಕ್ಷಿ ಸ್ಥಾನವನ್ನು ಖಚಿತಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷೆಯ ಪ್ರಮಾಣ ಪ್ರಕಟಿಸುವ ವಿಚಾರಣೆಯ ವೇಳೆ ಶಾಸಕ ವಿನಯ್ ಕುಲಕುಲಕರ್ಣಿ ನಾನು 27 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ, ಯಾರಿಗೂ ನೋವು ಮಾಡಿಲ್ಲ. ನನಗೆ ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಮತ್ತು ನಾನು 3,500 ಹಸುಗಳನ್ನು ಸಾಕುತ್ತಿರುವ ಕೃಷಿಕ ಹಾಗಾಗಿ ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಿದ್ದರು.

ಘಟನೆಯ ಹಿನ್ನೆಲೆ:
ಕೊಲೆ: 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಉದಯ ಜಿಮ್‌ನಲ್ಲಿ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

ತನಿಖೆ: ಮೊದಲು ಸ್ಥಳೀಯ ಪೊಲೀಸರು ಇದನ್ನು ಆಸ್ತಿ ವಿವಾದ ಎಂದು ತನಿಖೆ ನಡೆಸಿದ್ದರು. ಆದರೆ, ಮೃತರ ಕುಟುಂಬದ ಒತ್ತಾಯದ ಮೇರೆಗೆ 2019ರಲ್ಲಿ ಪ್ರಕರಣ ಸಿಬಿಐ ಕೈಗೆ ಹೋದಾಗ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ಸಾಬೀತಾಗಿತ್ತು.

ಬಂಧನ: 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ್ದರು.

ಧಾರವಾಡದ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಇಂದು ತಾರ್ಕಿಕ ಅಂತ್ಯ ಸಿಕ್ಕಂತಾಗಿದ್ದು, ನ್ಯಾಯಾಲಯದ ತೀರ್ಪಿನಿಂದ ಮೃತ ಯೋಗೀಶ್ ಗೌಡ ಕುಟುಂಬಕ್ಕೆ ನ್ಯಾಯ ಸಿಕ್ಕಂತಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular