ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಉಡುಗೊರೆಯಾಗಿ ಉಚಿತ LPG ಸಿಲಿಂಡರ್ ವಿತರಣೆ

ಲಖನೌ: ದೀಪಾವಳಿ ಉಡುಗೊರೆಯಾಗಿ ಉಜ್ವಲ ಫಲಾನುಭವಿಗಳಿಗೆ ಉಚಿತವಾಗಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಮುಂಬರುವ ನವರಾತ್ರಿ ಮತ್ತು ದೀಪಾವಳಿಗೆ ಮುಂಚಿತವಾಗಿ ಯೋಗಿ ಆದಿತ್ಯನಾಥ್ ರಾಜ್ಯದ ಜನತೆಗೆ ಮಹತ್ವದ ಉಡುಗೊರೆಯನ್ನು ಘೋಷಿಸಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ(ಪಿಎಂಯುವೈ) ಫಲಾನುಭವಿಗಳು ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ನಿರ್ಧಾರದಿಂದ ರಾಜ್ಯದ ಎರಡು ಕೋಟಿ ಕುಟುಂಬಗಳಿಗೆ ಅನುಕೂಲವಾಗುವ ನಿರೀಕ್ಷೆ ಇದ್ದು, ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ವಿಶೇಷವಾಗಿ ದೀಪಾವಳಿ ಸಂದರ್ಭದಲ್ಲಿ ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು ರಾಜ್ಯದ ಮಹಿಳೆಯರಿಗೆ ಮಹತ್ವದ ಕೊಡುಗೆಯಾಗಲಿದೆ.

ಮುಂಬರುವ ಹಬ್ಬಗಳ ಸಿದ್ಧತೆಗಳನ್ನು ಪರಿಶೀಲಿಸಲು ಮಂಗಳವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ದೀಪಾವಳಿಯ ಮೊದಲು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read