ಏ. 26 ರಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್: ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ

ಬೆಂಗಳೂರು: ಏಪ್ರಿಲ್ 26ರಂದು ವಿಜಯಪುರ ಜಿಲ್ಲೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 26ರಂದು ಮಧ್ಯಾಹ್ನ 2:30ಕ್ಕೆ ಬಸವನಬಾಗೇವಾಡಿಗೆ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 2:40ಕ್ಕೆ ಮೂಲ ನಂದೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಜೈನಾಪುರ ರಸ್ತೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಸಿಎಂ ಯೋಗಿ ಭಾಗಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್.ಕೆ. ಬೆಳ್ಳುಬ್ಬಿ ಪರ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 26ರಂದು ಸಂಜೆ 5:50ಕ್ಕೆ ಇಂಡಿ ಪಟ್ಟಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಕಾಸುಗೌಡ ಬೀರದಾರ ಪರವಾಗಿ ಮತಯಾಚಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read