HomeKarnatakaBIG NEWS: ಯೋಗೀಶ್ ಗೌಡ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪರಿಗಣಿಸಿದ್ದ ಆದೇಶ ರದ್ದುಪಡಿಸಿದ ಹೈಕೋರ್ಟ್

BIG NEWS: ಯೋಗೀಶ್ ಗೌಡ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪರಿಗಣಿಸಿದ್ದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.

ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರು ಸೇರಿದಂತೆ ಒಟ್ಟು 17 ಆರೋಪಿಗಳು ವಿಶೇಷ ನ್ಯಾಯಾಲಯದ ಆದೇಶ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ.

ಮಾಫಿ ಸಾಕ್ಷಿಯನ್ನಾಗಿಸಿ ಸಾಕ್ಷಿ ವಿಚಾರಣೆ ನಡೆಸಲು ಮೊದಲಿಗೆ ಪಾಟಿ ಸವಾಲು ನಡೆಸಬೇಕು. ಆದರೆ, ಈ ಪ್ರಕರಣದಲ್ಲಿ ಆರೋಪಿಯನ್ನು ಮಾಫಿ ಸಾಕ್ಷಿಯನ್ನಾಗಿಸುವ ಮೊದಲೇ ಮ್ಯಾಜಿಸ್ಟ್ರೇಟ್ ಮುಂದೆ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇದು ಕಾನೂನುಬಾಹಿರ ಕ್ರಮವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular