HomeKarnatakaBREAKING : ಯೋಗೀಶ್ ಗೌಡ ಕೊಲೆ ಕೇಸ್ : ಹೈಕೋರ್ಟ್'ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ...

BREAKING : ಯೋಗೀಶ್ ಗೌಡ ಕೊಲೆ ಕೇಸ್ : ಹೈಕೋರ್ಟ್’ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ.

ಈ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದ ಹೈಕೋರ್ಟ್ ಪೀಠವು, ಅನಿವಾರ್ಯ ಕಾರಣಗಳಿಂದಾಗಿ ದಿನಾಂಕವನ್ನು ಮುಂದೂಡಿದೆ. ವಿನಯ್ ಕುಲಕರ್ಣಿ ಪರ ವಕೀಲರು ಮತ್ತು ಸರ್ಕಾರದ ಪರ ವಾದ ಮಂಡಿಸುವ ವಕೀಲರ ನಡುವೆ ನಡೆಯುತ್ತಿರುವ ವಾದ-ಪ್ರತಿವಾದಗಳ ಹಿನ್ನೆಲೆಯಲ್ಲಿ, ಈ ಪ್ರಕರಣವು ರಾಜ್ಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯವು ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಈಗ ಮಹತ್ವ ಪಡೆದುಕೊಂಡಿದೆ.

ಘಟನೆಯ ಹಿನ್ನೆಲೆ:

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ.2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಉದಯ ಜಿಮ್‌ನಲ್ಲಿ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲು ಸ್ಥಳೀಯ ಪೊಲೀಸರು ಇದನ್ನು ಆಸ್ತಿ ವಿವಾದ ಎಂದು ತನಿಖೆ ನಡೆಸಿದ್ದರು. ಆದರೆ, ಮೃತರ ಕುಟುಂಬದ ಒತ್ತಾಯದ ಮೇರೆಗೆ 2019ರಲ್ಲಿ ಪ್ರಕರಣ ಸಿಬಿಐ ಕೈಗೆ ಹೋದಾಗ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ಸಾಬೀತಾಗಿತ್ತು.2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular