ಬೆಂಗಳೂರು : ಕಾಮಿಡಿ ಕಿಲಾಡಿ ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನಕ್ಕೆ ನಟ ರಿಷಬ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ನಟ ರಿಷಬ್ ಶೆಟ್ಟಿ ”ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗು ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ .. ಮತ್ತೆ ಹುಟ್ಟಿ ಬಾ ಗೆಳೆಯ .. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ” ಎಂದು ನಟ ರಿಷಬ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.
ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗು ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ .. ಮತ್ತೆ ಹುಟ್ಟಿ ಬಾ ಗೆಳೆಯ ..
— Rishab Shetty (@shetty_rishab) May 12, 2025
ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ… pic.twitter.com/x2Cev99kGi