ಸಾರಿಗೆ ಸಂಸ್ಥೆ ಭಾರೀ ಲಾಭದಲ್ಲಿದೆ ಎಂದು ಸುಳ್ಳು ಹೇಳಿ ದಿವಾಳಿ ಮಾಡಿದ್ದೇ ನೀವು: ಬಸ್ ನಿಲ್ದಾಣ ಹರಾಜು ಹಾಕಿದರೂ ಅಚ್ಚರಿಯಿಲ್ಲ..!: ಸಿಎಂಗೆ ಆರ್. ಅಶೋಕ್ ತಿರುಗೇಟು

ಬೆಂಗಳೂರು: ಸಾರಿಗೆ ಮುಷ್ಕರದ ಕುರಿತು ಟೀಕೆ ಮಾಡಿದ್ದರ ಬಗ್ಗೆ ಸಿಎಂ ಸಿದ್ಧರಾಮಯ್ಯ ತಮ್ಮ ವಿರುದ್ಧ ಮಾಧ್ಯಮ ಪ್ರಕಟಣೆ ನೀಡಿದ್ದ ಹಿನ್ನೆಲೆಯ್ಲಲಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ.

ಸಾರಿಗೆ ಸಂಸ್ಥೆಗಳು ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಲಾಭದಲ್ಲಿದೆ ಎಂದು ಸುಳ್ಳು ಹೇಳಿಕೊಂಡು ಪುಟಗಟ್ಟಲೇ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದಿದ್ದೆ ನಿಮ್ಮ ಏಕೈಕ ಸಾಧನೆ. ಅವೈಜ್ಞಾನಿಕ ಯೋಜನೆಗಳ ಮೂಲಕ ರಾಜ್ಯ ಸಾರಿಗೆ ಸಂಸ್ಥೆಗಳನ್ನ ದಿವಾಳಿ ಮಾಡಿದ ಕುಖ್ಯಾತಿ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ನಿಮ್ಮ ದುರಾಡಳಿತದಿಂದ ಬಸ್ ನಿಲ್ದಾಣಗಳನ್ನೂ ಲೀಸ್‌ಗಿಡುವ ಹೀನಾಯ ಸ್ಥಿತಿಗೆ ಇಂದು KSRTC ಸಂಸ್ಥೆ ತಲುಪಿದೆ. ನಿಮ್ಮ ಕಾರ್ಯವೈಖರಿಗೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಒಂದೆಡೆ, ಈಗಾಗಲೇ 15-30% ಟಿಕೆಟ್ ದರ ಏರಿಕೆ ಮಾಡಿದ್ದೀರಿ, ಮತ್ತೊಂದೆಡೆ KSRTC ಸಂಸ್ಥೆಯನ್ನ 2,000 ಕೋಟಿ ರೂಪಾಯಿ ಸಾಲದ ಸುಳಿಯಲ್ಲಿ ಸಿಲುಕಿಸಿದ್ದೀರಿ. ನೌಕರರಿಗೆ 1,800 ಕೋಟಿ ಹಿಂಬಾಕಿ ಉಳಿಸಿಕೊಂಡಿದ್ದೀರಿ, ನಿಗಮಗಳಿಗೆ 6,000 ಕೋಟಿ ರೂಪಾಯಿ ಬಾಕಿ ಇದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಅರ್ಥಿಕ ಪರಿಸ್ಥಿತಿ ನಿಭಾಯಿಸಲು ಬಸ್ ನಿಲ್ದಾಣಗಳನ್ನು ಹರಾಜು ಹಾಕಿದರೂ ಅಚ್ಚರಿಯಿಲ್ಲ!

2013ರಲ್ಲಿ ನಾನು ಸಾರಿಗೆ ಸಚಿವನಾಗಿದ್ದಾಗ, ಸಾರಿಗೆ ಸಂಸ್ಥೆಗಳಲ್ಲಿ 1,000 ಕೋಟಿ ರೂ.ಗೂ ಹೆಚ್ಚು ಲಾಭ ತಂದುಕೊಟ್ಟಿದ್ದೆ. ಸಾರಿಗೆ ನಿಗಮಗಳಲ್ಲಿ 25,000 ಜನರಿಗೆ ಕಾಯಂ ಉದ್ಯೋಗ ಕೊಟ್ಟಿದ್ದೆ. ಪ್ರಯಾಣಿಕರಿಗೆ ಗುಣಮಟ್ಟದ ನಿಲ್ದಾಣ ಮತ್ತು ಬಸ್ ಸೇವೆ, ಇಂಧನ ಉಳಿತಾಯ, ಜೈವಿಕ ಇಂಧನ ಬಳಕೆ ಮತ್ತಿತರ ಕಾರ್ಯದಕ್ಷತೆ ಗಮನಿಸಿ ಅಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ರಾಜ್ಯಕ್ಕೆ 30ಕ್ಕೂ ಹೆಚ್ಚು ಪ್ರಶಸ್ತಿ ನೀಡಿತ್ತು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಾಂಕ್ರಾಮಿಕದ ಪರಿಣಾಮದಿಂದ ಸಾರಿಗೆ ಸಂಸ್ಥೆಗಳಿಗೆ ನಷ್ಟ ಆಗಿದ್ದು ನಿಜ. ಆದರೆ ಬೇರೆ ರಾಜ್ಯಗಲ್ಲಿ ಸಾರಿಗೆ ನೌಕರರಿಗೆ ಸಂಬಳವೂ ಕೊಡದಿದ್ದ ಸಂದರ್ಭದಲ್ಲೂ ನಾವು ವೇತನ ಕೊಟ್ಟಿದ್ದೇವೆ. ಅದು ಕಾರ್ಮಿಕರ ಕಲ್ಯಾಣದ ಬಗ್ಗೆ ನಮ್ಮ ಪಕ್ಷದ ಬದ್ಧತೆ. ನಮ್ಮ ಪಕ್ಷವಾಗಲಿ, ನಾನಾಗಲಿ ತಮ್ಮಿಂದ ಆಡಳಿತದ ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read