HomeKarnatakaಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು: ಡಿಜಿಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸಚಿವ ರಾಮಲಿಂಗಾರೆಡ್ಡಿ...

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು: ಡಿಜಿಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ

ಬೆಂಗಳೂರು- ಜಲಮೂಲಗಳ ಮಾಲಿನ್ಯ ತಡೆಗಟ್ಟುವ ಹಾಗೂ ಜಲಚರಗಳ ಸಂರಕ್ಷಣೆಯ ಮಹತ್ವದ ಉದ್ದೇಶದಿಂದ ಮುಂಬರುವ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಅರಣ್ಯ, ಪರಿಸರ ಹಾಗೂ ವಾಯುಮಾಲಿನ್ಯ ನಿಯಂತ್ರಣ ಸಚಿವ ರಾಮಲಿಂಗಾರೆಡ್ಡಿ ಅವರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಸಲೀಂ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ.

ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಮತ್ತು ರಾಸಾಯನಿಕ ಬಣ್ಣಗಳಿಗೆ ನಿಷೇಧ

​ *ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಮತ್ತು ರಾಸಾಯನಿಕ ಬಣ್ಣಗಳಿಗೆ ನಿಷೇಧ:*

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯಂತೆ, PoP ಮೂರ್ತಿಗಳು ಮತ್ತು ರಾಸಾಯನಿಕ ಹಾಗೂ ಭಾರ ಲೋಹಯುಕ್ತ ಬಣ್ಣಗಳು ಜಲಮೂಲಗಳನ್ನು ಕಲುಷಿತಗೊಳಿಸಿ ಜಲಚರಗಳಿಗೆ ಮಾರಕವಾಗುತ್ತಿರುವುದನ್ನು ಪತ್ರದಲ್ಲಿ ಗಂಭೀರವಾಗಿ ಪರಿಗಣಿಸಲಾಗಿದೆ.

ನೈಸರ್ಗಿಕ ಜೇಡಿಮಣ್ಣಿನ ಮೂರ್ತಿಗಳನ್ನು ಪ್ರೋತ್ಸಾಹ

​ *ನೈಸರ್ಗಿಕ ಜೇಡಿಮಣ್ಣಿನ ಮೂರ್ತಿಗಳಿಗೆ ಆದ್ಯತೆ* :

ಸಾರ್ವಜನಿಕರು ಹಾಗೂ ಗಣೇಶೋತ್ಸವ ಸಮಿತಿಗಳು ಕೇವಲ ನೈಸರ್ಗಿಕ ಜೇಡಿಮಣ್ಣಿನಿಂದ ತಯಾರಿಸಿದ, ಬಣ್ಣರಹಿತ ಅಥವಾ ಪರಿಸರ ಸ್ನೇಹಿ ಬಣ್ಣಗಳನ್ನು ಬಳಸಿದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸುವಂತೆ ಪ್ರೋತ್ಸಾಹಿಸಲು ಸೂಚಿಸಲಾಗಿದೆ.

ಬೆಂಗಳೂರು ನಗರಕ್ಕೆ ವಿಶೇಷ ಸೂಚನೆ

​ಬೆಂಗಳೂರು ನಗರಕ್ಕೆ ವಿಶೇಷ ಸೂಚನೆ:

ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ರಾಸಾಯನಿಕ ಮತ್ತು ಭಾರ ಲೋಹಗಳಿಂದ ಅಲಂಕರಿಸಲ್ಪಟ್ಟ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಪ್ರತಿಷ್ಠಾಪನೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲು ಕಾವಲು ಹಾಗೂ ಪೊಲೀಸ್ ಇಲಾಖೆಯ ಸಹಕಾರ ಕೋರಲಾಗಿದೆ.

ಜಾಗೃತಿ ಮತ್ತು ನಿಯಮಗಳ ಕಟ್ಟುನಿಟ್ಟು ಪಾಲನೆ

​ *ಜಾಗೃತಿ ಮತ್ತು ನಿಯಮಗಳ ಕಟ್ಟುನಿಟ್ಟು ಪಾಲನೆ:*

ಪ್ರಗತಿ ಪರಿಶೀಲನಾ ಸಭೆಯ ನಿರ್ಣಯದಂತೆ, ಪೊಲೀಸ್ ಇಲಾಖೆಯು ಆಯೋಜಕರೊಂದಿಗೆ ಸಮಾಲೋಚನೆ ನಡೆಸಿ ಪರಿಸರ ಕಾನೂನುಗಳ ಕಟ್ಟುನಿಟ್ಟಿನ ಪಾಲನೆಗೆ ಕ್ರಮ ಕೈಗೊಳ್ಳಲು ಪತ್ರದಲ್ಲಿ ಒತ್ತಾಯಿಸಲಾಗಿದೆ.

​ಪರಿಸರ ಸಮತೋಲನವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಈ ಜಂಟಿ ಪ್ರಯತ್ನವು ನಾಡಿನಾದ್ಯಂತ ಹಸಿರು ಗಣೇಶೋತ್ಸವ ಆಚರಣೆಗೆ ಬಲ ತುಂಬುವ ನಿರೀಕ್ಷೆಯಿದೆ.

​

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular