ಪ್ರಸಕ್ತ ಐಪಿಎಲ್ ಪಂದ್ಯಾವಳಿಗಳು ನಡೆಯುತ್ತಿದ್ದು, ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶನಿವಾರದಂದು ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲೂ ಕೈ ಚೆಲ್ಲಿದೆ.
ಈ ಪಂದ್ಯ ನಡೆಯುವಾಗಲೇ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ತನ್ನ ನೆಚ್ಚಿನ ಆಟಗಾರನನ್ನು ಅಪ್ಪಿಕೊಂಡಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೆರ್ಸಿ ತೊಟ್ಟಿದ್ದ ಈ ಯುವಕ ಸೆಕ್ಯೂರಿಟಿಯವರ ಕಣ್ತಪ್ಪಿಸಿ ಮೈದಾನಕ್ಕೆ ನುಗ್ಗಿ ಕೊಹ್ಲಿಯವರಿಗೆ ಕೈ ಕುಲುಕಿ ಅಪ್ಪಿಕೊಂಡಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸೆಕ್ಯೂರಿಟಿ ತಂಡ ಆತನನ್ನು ಮೈದಾನದಿಂದ ಹೊರಗೆ ಕರೆದೊಯ್ದಿದೆ.
https://twitter.com/ImBansi07/status/1776657127471522014?ref_src=twsrc%5Etfw%7Ctwcamp%5Etweetembed%7Ctwterm%5E1776657127471522014%7Ctwgr%5E5bbc29b1203535f6aa402e249cec26e0903202c0%7Ctwcon%5Es1_&ref_url=https%3A%2F%2Fwww.freepressjournal.in%2Fsports%2Fviral-video-young-fan-runs-onto-pitch-to-hug-virat-kohli-amid-rr-vs-rcb-ipl-2024-clash