ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ರಕ್ಷಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
19 ವರ್ಷದ ಯುವತಿ ರಕ್ಷಿಸಲ್ಪಟ್ಟವಳು. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಯುವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ಯುವತಿಯನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿದ್ದಾರೆ.
ಬೆಂಗಳೂರು ಮೂಲದ ಯುವತಿ ಮನೆಯಲ್ಲಿ ಗಲಾಟೆ ಮಾಡಿಕೊಂಡು ಬಂದು ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದುಬಂದಿದೆ.
ಸದ್ಯ ಯುವತಿಯನ್ನು ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.