HomeKarnatakaಕಿರಿಯ ವಕೀಲೆಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ: ವಕೀಲನ ಸನ್ನದು ಅಮಾನತು

ಕಿರಿಯ ವಕೀಲೆಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ: ವಕೀಲನ ಸನ್ನದು ಅಮಾನತು

ಬೆಂಗಳೂರು: ಕಿರಿಯ ವಕೀಲಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವಕೀಲ ಹೆಚ್. ಮಂಜುನಾಥ್(46) ಅವರ ಸನ್ನದು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.

ಕರ್ನಾಟಕ ವಕೀಲರ ಪರಿಷತ್ ಮಂಜುನಾಥ್ ಅವರ ಸನ್ನದು ತಾತ್ಕಾಲಿಕವಾಗಿ ಅಮಾನತು ಪಡಿಸಿ ಆದೇಶಿಸಿದೆ. ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳಾ ವಕೀಲೆ ದೂರು ಸಲ್ಲಿಸಿದ್ದು, ಇದನ್ನು ಆಧರಿಸಿ ಪರಿಶೀಲನೆ ನಡೆಸಿ ಶಿಸ್ತು ಪ್ರಾಧಿಕಾರದ ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಕರ್ನಾಟಕ ವಕೀಲರ ಪರಿಷತ್ ಇತ್ತೀಚೆಗೆ ಈ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣವನ್ನು ಪರಿಷತ್ ನ ಶಿಸ್ತು ಸಮಿತಿಗೆ ವಹಿಸಲಾಗಿದ್ದು, ವಿಚಾರಣೆ ಪೂರ್ಣಗೊಳ್ಳುವವರೆಗೆ ವಕೀಲ ಹೆಚ್. ಮಂಜುನಾಥ್ ಅವರ ಸನ್ನದು ಅಮಾನತು ಮಾಡಲಾಗಿದೆ ಎಂದು ಪರಿಷತ್ ಅಧ್ಯಕ್ಷ ಹೆಚ್.ಎಲ್. ವಿಶಾಲ್ ರಘು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular