ಶಿವಮೊಗ್ಗ: ಸಾರ್ವಜನಿಕರಿಗೆ ಭಯಭೀತಿಗೊಳಿಸುವ ರೀತಿಯಲ್ಲಿ ಕೈಯಲ್ಲಿ ಲಾಂಗ್ ಹಿಡಿದು ದೃಶ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಯುವಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಟಿಪ್ಪು ನಗರದ ಹೈದರ್ ಬಂಧಿತ ಯುವಕ. ತನ್ನ ಫೇಸ್ ಬುಕ್ ಖಾತೆಯಲ್ಲಿ ಲಾಂಗ್ ಹಿಡಿದು ಹುಚ್ಚಾಟ ಮೆರೆದಿದ್ದ ವಿಡಿಯೋವನ್ನು ಅಪ್ಲೋಡ್ ಮಾಡಿದ್ದ. ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ಭಯ ಹುಟ್ಟಿಸುವ ರೀತಿಯಲ್ಲಿ ಪ್ರದರ್ಶಿಸಿ ವಿಡಿಯೋ, ಫೋಟೋ ಅಪ್ಲೋಡ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ತುಂಗಾನಗರ ಠಾಣೆ ಪೋಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.