HomeLatest Newsಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ರೀಲ್ಸ್: ಯುವಕ ಅರೆಸ್ಟ್

ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ರೀಲ್ಸ್: ಯುವಕ ಅರೆಸ್ಟ್

ಶಿವಮೊಗ್ಗ: ಸಾರ್ವಜನಿಕರಿಗೆ ಭಯಭೀತಿಗೊಳಿಸುವ ರೀತಿಯಲ್ಲಿ ಕೈಯಲ್ಲಿ ಲಾಂಗ್ ಹಿಡಿದು ದೃಶ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಯುವಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಟಿಪ್ಪು ನಗರದ ಹೈದರ್ ಬಂಧಿತ ಯುವಕ. ತನ್ನ ಫೇಸ್ ಬುಕ್ ಖಾತೆಯಲ್ಲಿ ಲಾಂಗ್ ಹಿಡಿದು ಹುಚ್ಚಾಟ ಮೆರೆದಿದ್ದ ವಿಡಿಯೋವನ್ನು ಅಪ್ಲೋಡ್ ಮಾಡಿದ್ದ. ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ಭಯ ಹುಟ್ಟಿಸುವ ರೀತಿಯಲ್ಲಿ ಪ್ರದರ್ಶಿಸಿ ವಿಡಿಯೋ, ಫೋಟೋ ಅಪ್ಲೋಡ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ತುಂಗಾನಗರ ಠಾಣೆ ಪೋಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular