HomeKarnatakaBIG NEWS: ಸ್ನೇಹಿತರ ಜೊತೆ ಈಜಲು ಹೋಗಿದ್ದ ಯುವಕ ನೀರುಪಾಲು

BIG NEWS: ಸ್ನೇಹಿತರ ಜೊತೆ ಈಜಲು ಹೋಗಿದ್ದ ಯುವಕ ನೀರುಪಾಲು

ಕೊಪ್ಪಳ: ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ.

ಮಂಜುನಾಥ್ (19) ಮೃತ ದುರ್ದೈವಿ. ಸ್ನೇಹಿತರ ಜೊತೆ ತೆರಳಿದ್ದ ಮಂಜುನಾಥ್ ಸಾಣಾಪುರ ಕೆರೆಯಲ್ಲಿ ಈಜಲು ಇಳಿದಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಯುವಕನ ಮೃತದೇಹಕ್ಕಾಗಿ ಹುದುಕಾಟ ನಡೆಸಲಾಗಿದೆ. ಗಂಗಾವತಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular