HomeKarnatakaBIG NEWS: ಸೆಲ್ಫಿ ತೆಗೆಯಲು ಹೋಗಿ ದುರಂತ: ಕೆರೆಯಲ್ಲಿ ಕಾಲುಜಾರಿ ಬಿದ್ದು ಯುವಕ ಸಾವು

BIG NEWS: ಸೆಲ್ಫಿ ತೆಗೆಯಲು ಹೋಗಿ ದುರಂತ: ಕೆರೆಯಲ್ಲಿ ಕಾಲುಜಾರಿ ಬಿದ್ದು ಯುವಕ ಸಾವು

ವಿಜಯನಗರ: ಕೋಡಿ ಬಿದ್ದಿದ್ದ ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋದ ಯುವಕ ಕಾಲು ಜಾರಿಬಿದ್ದು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗಂಡಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಚೇತನ್ ಕುಮಾರ್ (21) ಮೃತ ದುರ್ದೈವಿ. ಭಾರಿ ಮಳೆಯಿಂದಾಗಿ ಗಂಡಬೊಮ್ಮನಹಳ್ಳಿ ಕೆರೆ ಸಂಪೂರ್ಣ ಭರ್ತಿಯಾಗಿತ್ತು. ಅಪಾರ ಪ್ರಮಾಣದ ನೀರು ಹರಿದು ಬಂದ ಪರಿಣಾಮ ಕೆರೆ ಕೋಡಿ ಬಿದ್ದು ಹೋಗಿತ್ತು. ಕೋಡಿ ಬಿದ್ದ ಕೆರೆಬಳಿ ನಿಂತು ಚೇತನ್ ಕುಮಾರ್ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಸೆಲ್ಫಿ ತೆಗೆಯುತ್ತಿದ್ದಾಗಲೇ ಕಾಲು ಜಾರಿ ಬಿದ್ದು ಯುವಕ ನೀರುಪಾಲಾಗಿದ್ದಾನೆ.

ತಕ್ಷಣ ಅಕ್ಕಪಕ್ಕದ ಜನರು ರಕ್ಷಣೆಗೆ ಮುಂದಾಗಿದ್ದಾರೆ. ಆದರೂ ಸಾಧ್ಯವಾಗಿಲ್ಲ. ನೋಡನೋಡುತ್ತಿದ್ದಂತೆ ಯುವಕ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಸುಮಾರು 200 ಮೀಟರ್ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular