HomeCrimeSHOCKING: ಜಗಳ ಬಿಡಿಸಲು ಹೋದ ಯುವಕನ ಎದೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಬರ್ಬರ ಹತ್ಯೆ

SHOCKING: ಜಗಳ ಬಿಡಿಸಲು ಹೋದ ಯುವಕನ ಎದೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಬರ್ಬರ ಹತ್ಯೆ

ಬೆಳಗಾವಿ: ಜಗಳ ಬಿಡಿಸಲು ಹೋದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ಯಳ್ಳೂರು ರಸ್ತೆಯಲ್ಲಿ ನಡೆದಿದೆ.

ಸ್ಕ್ರೂ ಡ್ರೈವರ್ ನಿಂದ ಎದೆಗೆ ಚುಚ್ಚಿ ಪ್ರತೀಕ್ ಲೋಹಾರ್(21) ಹತ್ಯೆ ಮಾಡಲಾಗಿದೆ. ಕೊಲೆಯಾದ ಪ್ರತೀಕ್ ಮಜಗಾಂವ್ ಗ್ರಾಮದ ನಿವಾಸಿಯಾಗಿದ್ದಾನೆ. ತನ್ನ ಸ್ನೇಹಿತನ ಜೊತೆ ಕೆಲ ಯುವಕರು ಜಗಳವಾಡುವಾಗ ಬಿಡಿಸಲು ಹೋಗಿದ್ದ ವೇಳೆ ದುಷ್ಕರ್ಮಿಗಳು ಎದೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಗಳ ಬಿಡಿಸುವಾಗ ಬೈಕ್ ನಲ್ಲಿದ್ದ ಸ್ಕ್ರೂಡ್ರೈವರ್ ತೆಗೆದುಕೊಂಡು ಎದೆಗೆ ಚುಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಹಿಂದೆಯೂ ಇದೇ ಗ್ಯಾಂಗ್ ಪ್ರತೀಕ್ ಜೊತೆಗೆ ಜಗಳವಾಡಿತ್ತು ಎನ್ನಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular