ಬೆಳಗಾವಿ: ಪ್ರೀತಿ-ಮೇಮ ಎಂದು ಯುವತಿಯೊಂದಿಗೆ ಸುತ್ತಾಡುತ್ತಿದ್ದ ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡ ಯುವಕ, ವ್ಯಕ್ತಿಗೆ ಖಾರದ ಪುಡಿ ಎರಚಿ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ದರ್ಶನ್ ಎಂಬ ಯುವಕ ಮಡಿವಾಳಪ್ಪ ಎಂಬುವವರಿಗೆ ಕಣ್ಣಿಗೆ ಖಾರದಪುಡಿ ಎರಚಿ ಚಾಕು ಇರಿದು ಕೊಲೆಗೆ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಡಿವಾಳಪ್ಪ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಯುವಕ ದರ್ಶನ್, ಯುವತಿಯೊಬ್ಬಳನ್ನು ದೇವಸ್ಥಾನಕ್ಕೆ ಕರೆದೊಯ್ದಿದ್ದ. ಇದೇ ವಿಚಾರಕ್ಕೆ ಮಡಿವಾಳಪ್ಪ, ಯುವತಿಯ ಕುಟುಂಬದವರ ಎದುರಿಗೆ ಯುವಕನಿಗೆ ಬುದ್ಧಿಮಾತು ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಯುವಕ, ಮಡಿವಾಳಪ್ಪ ಅವರ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.
ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.