HomeKarnatakaBIG NEWS: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ; ಉದ್ರಿಕ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ...

BIG NEWS: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ; ಉದ್ರಿಕ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪೋಷಕರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಕಡಬ ಮೂಲದ ಶಾಕೀರ್ ಎಂಬಾತ ಬಾಲಕಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ವಿಷಯ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಪಿಯನ್ನು ತಮಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ. ಪರಿಸ್ಥಿತಿ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಹಿಂದು ಮುಖಂಡ ಅರುಣ್ ಪುತ್ತಿಲ ಸ್ಥಳಕ್ಕಾಗಮಿಸಿ ಯುವಕರ ಗುಂಪನ್ನು ಸಮಾಧಾನ ಪಡಿಸಿದ್ದಾರೆ. ಪೊಲೀಸರ ಜೊತೆ ಮಾತುಕತೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ಶಾಕೀರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular