HomeKarnatakaದುಷ್ಕರ್ಮಿಗಳ ದಾಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ದುಷ್ಕರ್ಮಿಗಳ ದಾಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಬೆಳಗಾವಿ: 13ಕ್ಕೂ ಹೆಚ್ಚು ದುಷ್ಕರ್ಮಿಗಳು ದಾಳಿ ನಡೆಸಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ.

ಆಶ್ರಯ ಕಾಲೋನಿ ಶಾಲಾ ಮೈದಾನದ ಬಳಿ ಈ ಘಟನೆ ನಡೆದಿದೆ. 23 ವರ್ಷದ ರವಿ ತಿಮ್ಮಣ್ಣ ಕೊಲೆಯಾದ ಯುವಕ. ದುಷ್ಕರ್ಮಿಗಳ ತಂಡ ಏಕಾಏಕಿ ಯುವಕನ ಮೇಲೆ ದಾಳಿ ನಡೆಸಿ, ಮನಬದಂತೆ ಹೊಡೆದಿದ್ದರು. ರಕ್ತದ ಮಡುವಿನಲ್ಲಿ ಪ್ರಜ್ಞಾಹೀನನಾಗಿ ಬಿದ್ದಿದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿಇತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಯುವಕನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular