ಬೆಳಗಾವಿ: ಹಾಡಹಗಲೇ ಸಂತೆಯಲ್ಲಿ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು ಸಂತೆಯ ದಿನವಾಗಿತ್ತು. ಸಂತೆಗೆ ಬಂದಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ಸ್ಥಳದಲ್ಲೇ ಯುವಕ ಮೃತಪಟ್ಟಿದ್ದಾನೆ.
ಹುಸೇನ ಕಿಲ್ಲೇದಾರ (25) ಕೊಲೆಯಾಗಿರುವ ಯುವಕ. ಹುಕ್ಕೇರಿಯ ಅವರಗೋಳ ನಿವಾಸಿ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಹುಕ್ಕೇರಿ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.