HomeKarnatakaಕ್ಷುಲ್ಲಕ ಕಾರಣಕ್ಕೆ ಗಲಾಟೆ: ಯುವಕನನ್ನು ಇರಿದು ಕೊಂದ ದುಷ್ಕರ್ಮಿಗಳು

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಯುವಕನನ್ನು ಇರಿದು ಕೊಂದ ದುಷ್ಕರ್ಮಿಗಳು

ತುಮಕೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದ ಘಟನೆ ತುಮಕೂರಿನಲ್ಲಿ ನಡೆದಿದೆ.

20 ವರ್ಷದ ರಿಷಬ್ ಪಾಷಾ ಕೊಲೆಯಾದ ಯುವಕ. ಊಟಕ್ಕೆ ಕುಳಿತಿದ್ದ ಯುವಕನನ್ನು ಕರೆದು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.

ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ಈ ಘಟನೆ ನಡೆದಿದೆ. ರಕ್ತದ ಮಡುವಲ್ಲಿ ಬಿದ್ದಿದ್ದ ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಹುಡುಗಿಯ ವಿಚಾರವಾಗಿ ಗಲಾತೆ ನಡೆದು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular