HomeKarnatakaBIG NEWS: ಬಿ.ಇ ಪದವೀಧರನ ದುಡುಕಿನ ನಿರ್ಧಾರ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

BIG NEWS: ಬಿ.ಇ ಪದವೀಧರನ ದುಡುಕಿನ ನಿರ್ಧಾರ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ರಾಮನಗರ: ಬಿ.ಇ ಪದವೀಧರನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರದ ರೈಲು ನಿಲ್ದಾಣ ಬಳಿ ನಡೆದಿದೆ.

ಮಧು (23) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಬಿ.ಇ ಪದವೀಧರನಾಗಿದ್ದ ಮಧು, ಬೆಂಗಳೂರಿನ ನಾಗರಬಾವಿ ಮೂಲದವನು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಇದೀಗ ಏಕಾಏಕಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಯುವಕನ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular