HomeKarnatakaರಸ್ತೆ ಪಕ್ಕ ಕಸ ಎಸೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ

ರಸ್ತೆ ಪಕ್ಕ ಕಸ ಎಸೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪಟ್ಟಣದಲ್ಲಿ ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಬಿಸಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ ಹಾಕಿದ ಘಟನೆ ಸೋಮವಾರ ನಡೆದಿದೆ.

ಹೊಸನಗರ ಹೊರವಲಯದ ಕಾಳಿಕಾಪುರ ರಸ್ತೆಯಲ್ಲಿ ಮಹಿಳೆಯೊಬ್ಬರು ರಸ್ತೆ ಬದಿ ಕಸ ಎಸೆದಿದ್ದನ್ನು ಸ್ಥಳೀಯ ಯುವಕ ಕವೀಶ್ ಪ್ರಶ್ನಿಸಿದ್ದು, ವಿಡಿಯೋ ಮಾಡಿಕೊಂಡಿದ್ದಾರೆ. ಅಲ್ಲಿ ಕಸ ಎಸೆಯಬೇಡಿ ದುರ್ನಾತ ಬೀರುತ್ತದೆ. ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತದೆ ಎಂದು ಹೇಳಿದ್ದಾರೆ.

ಇದರಿಂದ ಆಕ್ರೋಶಗೊಂಡ ಮಹಿಳೆ ಮತ್ತು ಆಕೆಯ ಪ್ರತಿ ಸಲ್ಮಾನ್ ಅವರು ಜಗಳವಾಡಿ, ಅವಾಚ್ಯ ಪದಗಳಿಂದ ನಿಂದಿಸಿ ಕವೀಶ್ ಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕವೀಶ್ ಹೊಸನಗರ ಠಾಣೆ ಪೋಲೀಸರಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular