HomeLatest NewsBREAKING: ರಿಹ್ಯಾಬ್ ಸೆಂಟರ್ ನಿಂದ ಬಂದಿದ್ದ ಯುವಕ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣು

BREAKING: ರಿಹ್ಯಾಬ್ ಸೆಂಟರ್ ನಿಂದ ಬಂದಿದ್ದ ಯುವಕ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರು: ವ್ಯಸನ ಮುಕ್ತ ಕೇಂದ್ರದಿಂದ ಒಂದು ದಿನದ ಹಿಂದಷ್ಟೇ ಬಂದಿದ್ದ ಯುವಕನೊಬ್ಬ ಮನೆಯಲ್ಲಿಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗೌತಮ್ (28) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಬೆಂಗಳೂರಿನ ಅಶೋಕ ನಗರದಲ್ಲಿ ಈ ಘಟನೆ ನಡೆದಿದೆ. ಗೌತಮ್ ನಿನ್ನೆಯಷ್ಟೇ ವ್ಯಸನ ಮುಕ್ತ ಕೇಂದ್ರದಿಂದ ಮನೆಗೆ ಬಂದಿದ್ದ. ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರಂಭದಲ್ಲಿ ಇದು ಕೊಲೆ ಎಂದು ಮೇಲ್ನೋಟಕ್ಕೆ ಕಂಡು ಬಂದಿತ್ತು. ಆದರೆ ಪೊಲೀಸರು ಪರಿಶೀಲನೆ ನಡೆಸಿದಾಗ ಗೌತಮ್ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಯುಡಿಆರ್ ದಾಖಲಿಸಿಕೊಂಡಿರುವ ಅಶೋಕನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular