HomeKarnatakaಕೈಕೊಟ್ಟ ಪ್ರೀತಿ; ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಯುವಕ ಆತ್ಮಹತ್ಯೆ

ಕೈಕೊಟ್ಟ ಪ್ರೀತಿ; ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು: ಪ್ರೀತಿಸಿದ್ದ ಯುವತಿ ಕೈಕೊಟ್ಟು ಬೇರೆಯವನೊಂದಿಗೆ ವಿವಾಹವಾಗಲು ಮುಂದಾಗಿದ್ದಕ್ಕೆ ಮನನೊಂದ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಕೊಡಿಗೆಪಾಳ್ಯದಲ್ಲಿ ನಡೆದಿದೆ.

ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ಯುವಕ. ಐದಾರು ವರ್ಷದಿಂದ ರಾಕೇಶ್ , ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ. ಇತ್ತೀಚೆಗೆ ಯುವತಿ ರಾಕೇಶ್ ನನ್ನು ಅವಾಯ್ಡ್ ಮಾಡುತ್ತಿದ್ದಳಂತೆ. ಅಲ್ಲದೇ ಬೇರೊಬ್ಬನ ಜೊತೆ ವಿವಾಹ ನಿಶ್ಚಯವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ರಾಕೇಶ್ ಯುವತಿಯ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಯುವತಿಯೂ ಬೈದು ಕಳುಹಿಸಿದ್ದಳು ಎನ್ನಲಾಗಿದೆ. ಮನೆಗೆ ವಾಪಾಸ್ ಆದ ಯುವಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ತಕ್ಷಣ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಯುವಕನ ಕುಟುಂಬದವರು ಕೆಂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular